ಬೆಂಗಳೂರು,ಆ 23 (DaijiworldNews/HR): ಜನರು ಶಾಂತಿ-ಸೌಹಾರ್ದಯುತವಾಗಿ ಬದುಕಲು ಬಿಡದೇ ಹೊಸ ಹೊಸ ವಿವಾದಗಳನ್ನು ಸೃಷ್ಟಿಸುತ್ತಾ ಅನಗತ್ಯವಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಕೆಲಸಕ್ಕೆ ಬಿಜೆಪಿ, ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಾವರ್ಕರ್ ರಥಯಾತ್ರೆ, ಮಾಂಸಾಹಾರ ಸೇವನೆ ಇಂತಹ ವಿಚಾರಗಳಿಂದ ಏನು ಪ್ರಯೋಜನ? ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ಜನನಾಯಕರು ಕೊಡಗು, ಮಡಿಕೇರಿಯಲ್ಲಿ ಶಾಂತಿ ಕದಡಲು ಹೋಗಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದು, ಶಾಂತಿ ಸಂದೇಶ ಸಾರಲು ಬರುತ್ತಾರೋ ಅಥವಾ ಶಾಂತಿ ಕದಡಲು ಬರುತ್ತಾರಾ? ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಮಾತನಾಡಲು ಯಾವ ನೈತಿಕತೆ ಬಿಜೆಪಿಯಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.