ನವದೆಹಲಿ, ಆ 24 (DaijiworldNews/MS): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆಂದು ವಿದೇಶಕ್ಕೆ ತೆರಳಲಿದ್ದು, ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಅವರೊಂದಿಗೆ ತೆರಳಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಚಿಕಿತ್ಸೆಗೆ ನಿಖರವಾಗಿ ಯಾವಾಗ ಮತ್ತು ಯಾವ ಸ್ಥಳಕ್ಕೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಿಲ್ಲ. ಆದರೆ ಸೆಪ್ಟಂಬರ್ 4ರಂದು ರಾಹುಲ್ ಗಾಂಧಿ ಅವರು 'ಮೆಹಂಗಾಯಿ ಪರ್ ಹಲ್ಲಾ ಬೋಲ್' ಅಭಿಯಾನದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.
"ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿದೇಶಕ್ಕೆ ವೈದ್ಯಕೀಯ ಪರೀಕ್ಷೆಗೆ ತೆರಳಲಿದ್ದು, ಅಲ್ಲಿಂದ ಭಾರತಕ್ಕೆ ವಾಪಸ್ ಆಗುವ ಮುನ್ನ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲಿದ್ದಾರೆ" ಎಂದು ಜೈರಾಮ್ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.