ಮಡಿಕೇರಿ, ಆ 24 (DaijiwroldNews/HR): ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿರುವ ಈ ಹಿನ್ನೆಲೆಯಲ್ಲಿ ಕೊಡಗು ಹಡಿ ಭಾಗಗದ ಮೂರು ಕಡೆ ಚೆಕ್ ಪೋಸ್ಟ್ ಗಳಲ್ಲಿ ಸೂಕ್ತ ತಪಾಸಣೆ ಮಾಡಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಜನಜಾಗೃತಿ ಸಮಾವೇಶ ಆಯೋಜಿಸಿದ ಬೆನ್ನಲ್ಲೇ ಕೊಡಗು ಜಿಲ್ಲೆಯಾದ್ಯಂತ ನಾಲ್ಕು ದಿನಗಳರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಇನ್ನು ಜಿಲ್ಲೆಯಲ್ಲಿ ಯಾವುದೇ ರೀತಿ ಪ್ರತಿಭಟನೆ ಮತ್ತು ರಾಜಕೀಯ ಸಮಾವೇಶಗಳಿಗೆ ಅವಕಾಶ ಇಲ್ಲ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲ ಕಡೆ ಚೆಕ್ ಪೋಸ್ಟ್ ಅಳವಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.