ಪಾಟ್ನಾ, ಆ 24 (DaijiwroldNews/HR): ವಿಜಯ್ ಕುಮಾರ್ ಸಿನ್ಹಾ ಅವರು ಬಿಹಾರ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ನೀಡುವ ಮೊದಲು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ವಿರುದ್ದದ ಆರೋಪಗಳು "ಸ್ವೀಕಾರಾರ್ಹವಲ್ಲ" ಎಂದಿದ್ದಾರೆ.
ಇನ್ನು ಹಿರಿಯ ಆರ್ಜೆಡಿ ನಾಯಕ ಅವಧ್ ಬಿಹಾರಿ ಚೌಧರಿ ಅವರನ್ನು ಹೊಸ ಸ್ಪೀಕರ್ ಆಗಿ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ಗೊತ್ತುವಳಿ ಜಾರಿ ಮಾಡಲಾಗಿದ್ದರೂ ಅವರು ರಾಜೀನಾಮೆ ಕೊಡದಿರಲು ನಿರ್ಧರಿಸಿದ್ದರು. ನಾನು ರಾಜೀನಾಮೆ ನೀಡುವುದಿಲ್ಲ. ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ನಾನೇ ಸಭಾಧ್ಯಕ್ಷತೆ ವಹಿಸುತ್ತೇನೆ ಎಂದು ಬೆಳಗ್ಗೆ ಹೇಳಿದ್ದರು. ಆದರೆ ಅಧಿವೇಶನ ಆರಂಭವಾಗುತ್ತಿದ್ದಂತೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.