ತುಮಕೂರು, ಅ 24 (DaijiworldNews/MS): ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಪಕ್ಷದ ಹೈಕಮಾಂಡಿಗೆ ಬಿಟ್ಟ ವಿಚಾರ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಪೂರ್ಣಗೊಂಡಿದ್ದುಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೈ ಬಿಡಬೇಕೆಂಬ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ವಿಚಾರದ ಬಗ್ಗೆ ಸುದ್ದಿಗಾರರಾರ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನಳಿನ್ ಅವರನ್ನು ಮುಂದುವರಿಸಬೇಕೇ ಅಥವಾ ಬದಲಾಯಿಸಬೇಕೇ ಎನ್ನುವುದರ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.
ಅದು ಪಕ್ಷದ ಆಂತರಿಕ ವಿಚಾರ, ಮೂರು ವರ್ಷ ಆದ ಮೇಲೆ ಬೇರೆಯವರಿಗೆ ಅವಕಾಶ ಕೊಡುವುದು ಪಕ್ಷದ ನಿಯಮ. ಇದರ ಬಗ್ಗೆ ತೀರ್ಮಾನ ಕೈ ಗೊಳ್ಳಲು ಕೇಂದ್ರದ ವರಿಷ್ಠರು ಇದ್ದಾರೆ. ನಾವು ಜಿಲ್ಲೆಯಲ್ಲಿ ತೀರ್ಮಾನ ತಗೆದುಕೊಳ್ಳು ಸಾಧ್ಯವಿಲ್ಲ. ಕೇಂದ್ರದಿಂದ ಯಾವ ತೀರ್ಮಾನ ತಗೆದುಕೊಳ್ಳುತ್ತಾರೆಯೊ ಅದಕ್ಕೆ ನಾವೆಲ್ಲರೂ ಬದ್ದರಾಗಿರುವುದಾಗಿ ತಿಳಿಸಿದ್ದಾರೆ.