ನವದೆಹಲಿ, ಆ 24 (DaijiwroldNews/HR): ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಅವರು ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜೈವೀರ್ ಶೆರ್ಗಿಲ್ ಅವರು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.
ಇನ್ನು ನಿರ್ಣಯಗಳು ಸಾರ್ವಜನಿಕ ಮತ್ತು ದೇಶದ ಹಿತಾಸಕ್ತಿಗಳಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗಿದೆ ಎಂದು ಹೇಳಿ ರಾಜೀನಾಮೆ ನೀಡಿದ ಜೈವೀರ್ ಶೆರ್ಗಿಲ್ ತಿಳಿಸಿರುವುದಾಗಿ ವರದಿಯಾಗಿದೆ.