ನವದೆಹಲಿ, ಆ 24 (DaijiworldNews/DB): ಸಾಕ್ಷ್ಯಾಧಾರಗಳ ಮುಖಾಂತರವೇ ದೆಹಲಿ ಮದ್ಯ ನೀತಿ ಹಗರಣದ ತನಿಖೆ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಮದ್ಯನೀತಿಯಲ್ಲಿ ಕೋಟ್ಯಾಂತರ ರೂ. ಹಗರಣ ನಡೆದಿದೆ. ಆಮ್ ಆದ್ಮಿ ಪಕ್ಷ ಮಾತನಾಡಲು ಪ್ರಯತ್ನಿಸುತ್ತಿದೆಯಾದರೂ ಸಿಸೋಡಿಯಾ ವಂಚನೆ ಎಸಗಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರ ನೀಡುತ್ತಿಲ್ಲ. ದಿಲ್ಲಿ ಸರ್ಕಾರ ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಮನೀಶ್ ಸಿಸೋಡಿಯಾ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಭ್ರಷ್ಟಾಚಾರದ ವಿರುದ್ದದ ಹೋರಾಟ ಮತ್ತು ಭ್ರಷ್ಟರಿಗೆ ಅಂತ್ಯ ಹಾಡುವುದು ದೇಶದ ಸಂವಿಧಾನದ ತೃಪ್ತಿ. ಸಿಸೋಡಿಯಾ ಭ್ರಷ್ಟಾಚಾರ ಎಸಗಿರುವ ಬಗ್ಗೆ ಸಾಕ್ಷ್ಯಾಧಾರಗಳಿರುವ ಕಾರಣ ತನಿಖೆ ನಡೆಯುತ್ತಿದೆ ಎಂದವರು ತಿಳಿಸಿದರು.