ನವದೆಹಲಿ, ಆ 24 (DaijiwroldNews/HR): ದೆಹಲಿಯ ತನ್ನ ನಾಲ್ವರು ಶಾಸಕರನ್ನು ಬಿಜೆಪಿಯು ಸಂಪರ್ಕಿಸಿ ತಮ್ಮ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ) ಆರೋಪಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್, "ಶಾಸಕರಾದ ಅಜಯ್ ದತ್, ಸಂಜೀವ್ ಝಾ, ಸೋಮನಾಥ್ ಭಾರತಿ ಮತ್ತು ಕುಲದೀಪ್ ಕುಮಾರ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿ, ತಲಾ 20 ಕೋಟಿ ರೂ. ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಇನ್ನು ಎಎಪಿ ಶಾಸಕರು ಬಿಜೆಪಿಗೆ ಸೇರಿದರೆ ತಲಾ 20 ಕೋಟಿ ರೂ. ಮತ್ತು ಇತರ ಶಾಸಕರನ್ನು ತಮ್ಮೊಂದಿಗೆ ಕರೆತಂದರೆ 25 ಕೋಟಿ ರೂ.ಗಳನ್ನು ನೀಡುವ ಭರವಸೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.