ಬೆಂಗಳೂರು, ಆ 24 (DaijiwroldNews/SM): ಆರೋಗ್ಯ ಕ್ಷೇತ್ರ ಹಾಗೂ ಆರೋಗ್ಯ ಸೇವೆಗಳಲ್ಲಿ ಕರ್ನಾಟಕವನ್ನು ಮಾದರಿ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಷ್ಟೇ ಅಲ್ಲ, ಇಡೀ ಏಷ್ಯಾದಲ್ಲೇ ಮಾದರಿ ರಾಜ್ಯವನ್ನಾಗಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಕರ್ನಾಟಕ ಹೆಲ್ತ್ ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಿ ಮಾತನಾಡಿದರು.
ರಾಜ್ಯದ ಆರೋಗ್ಯ ಕ್ಷೇತ್ರ ಹಾಗೂ ವಿವಿಧ ಆರೋಗ್ಯ ಸೇವೆಗಳ ಬಗ್ಗೆ ಮುಂದಿನ ಕನಿಷ್ಠ 25 ವರ್ಷಗಳ ಗುರಿ ಇಟ್ಟುಕೊಂಡು ಬಹು ಆಯಾಮ ಹೊಂದಿದ ಸಮಗ್ರ ವಿಷನ್ ಡಾಕ್ಯುಮೆಂಟ್’ ತಯಾರಿಸಲಾಗಿದೆ. ಇದು ಆರೋಗ್ಯ ಕ್ಷೇತ್ರದ ನಿರ್ವಹಣೆಗೆ ಎನ್ಸೈಕ್ಲೋಪಿಡಿಯಾ’ ಆಗಲಿದೆ ಎಂದು ತಿಳಿಸಿದರು.