ಕೇರಳ, ಆ 25 (DaijiworldNews/DB): ಟಾಟಾ ಟಿಯಾಗೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
ಕೇರಳದ ಕುಟುಂಬವೊಂದು ಟಾಟಾ ಟಿಯಾಗೋ ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ ಉರುಳಿ ಬಿದ್ದಿದೆ. ವಾಹನದ ಮುಂಭಾಗದಲ್ಲಿರುವ ಏರ್ಬ್ಯಾಗ್ಗಳಿಗಷ್ಟೇ ಹಾನಿಯಾಗಿದ್ದು, ಕಾರೊಳಗಿದ್ದ ನಾಲ್ವರಿಗೆ ಯಾವುದೇ ಗಾಯಗಳಾಗಿಲ್ಲ.
ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಟಾಟಾ ಟಿಯಾಗೋದಲ್ಲಿ ಗ್ರಾಹಕರ ಸುರಕ್ಷತೆಗೆ ಆದ್ಯತೆ ನೀಡಲಾಗಿರುವ ಬಗ್ಗೆ ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.