ನವದೆಹಲಿ, ಆ 25 (DaijiworldNews/DB): ಭೇಟಿ ಬಚಾವೋ ಎಂಬ ಪೊಳ್ಳು ಘೋಷಣೆ ಮಾಡುವವರು ಅತ್ಯಾಚಾರಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಭೇಟಿ ಬಚಾವೋ ಎಂದು ಘೋಷಣೆ ಮಾಡುವವರು ಅತ್ಯಾಚಾರಿಗಳನ್ನು ಕಾಪಾಡುವ ಕೆಲಸವನ್ನು ಮಾಡುತ್ತಿರುವುದು ದುರಂತ. ದೇಶದ ಮಹಿಳೆಯರ ಗೌರವ ಮತ್ತು ಹಕ್ಕುಗಳಿಗೆ ಇದು ವಿರುದ್ದವಾಗಿದೆ. ಗುಜರಾತ್ ಗಲಭೆಯಲ್ಲಿ ಬದುಕುಳಿದ ಬಿಲ್ಕಿಸ್ ಬಾನು ಅವರಿಗೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಮಂದಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದರೆ ಆಗಸ್ಟ್ 15 ರಂದು ಎಲ್ಲಾ ಅಪರಾಧಿಗಳನ್ನು ಗುಜರಾತ್ ಸರ್ಕಾರ ಜೈಲಿನಿಂದ ಬಿಡುಗಡೆಗೊಳಿಸಿತ್ತು. ಅಪರಾಧಿಗಳು ಬಿಡುಗಡೆಗೊಂಡು ಹೊರ ಬರುತ್ತಿದ್ದಂತೆ ಅವರಿಗೆ ಹಾರ ಹಾಕಿ ಸ್ವಾಗತ ಕೋರಿರುವುದಕ್ಕೆ ದೇಶಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.