ರಾಂಚಿ, ಆ 25 (DaijiworldNews/DB): ಶಾಸಕ ಸ್ಥಾನದಿಂದ ತನ್ನನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸ್ಸು ಮಾಡಿರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಆದರೆ ನನಗೆ ಈ ಸಂಬಂಧ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಯ ಓರ್ವ ಸಂಸದ, ಕೆಲವು ನಾಯಕರು, ಸಂಸದನ ಕೈಗೊಂಬೆಗಳಾಗಿರುವ ಕೆಲ ಪತ್ರಕರ್ತರು ಸೇರಿ ಇಸಿಐ ವರದಿ ಸಿದ್ದಪಡಿಸಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದರು.
ಸೊರೇನ್ ಅವರೇ ಸ್ವತಃ ಗಣಿಗಾರಿಕೆಯನ್ನು ಲೀಸ್ಗೆ ಕೊಡಿಸಿರುವುದರಿಂದ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ವಿಧಾನಸಭೆಯನ್ನು ವಿಸರ್ಜಿಸಬೇಕು. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಸಬೇಕೆಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿರುವುದಾಗಿ ವರದಿಯಾಗಿದೆ.