ಮುಂಬೈ, ಆ 26 (DaijiworldNews/HR): ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಹಾಗೂ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಶುಕ್ರವಾರ ಮುಂಜಾನೆ 02.21 ಕ್ಕೆ ಭೂಕಂಪ ಸಂಭವಿಸಿದ್ದು, ಭೂಕಂಪದ ಆಳವು ನೆಲದಿಂದ 10 ಕಿ.ಮೀ. ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಪೂರ್ವಕ್ಕೆ 171 ಕಿಮೀ ದೂರದಲ್ಲಿ ಮುಂಜಾನೆ 2.21ರ ಸುಮಾರಿಗೆ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 10 ಕಿಮೀ ಆಳದಲ್ಲಿದೆ ಎಂದು ವರದಿಯಾಗಿದೆ.
ಇನ್ನು ಇದಕ್ಕೆ ಮೊದಲು ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ಎನ್ಸಿಎಸ್ ಮಾಹಿತಿ ನೀಡಿದೆ.