ಉತ್ತರ ಪ್ರದೇಶ, ಆ 26 (DaijiworldNews/HR): ಮದುವೆ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿ 5 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಐದು ಅಗ್ನಿಶಾಮಕ ಟೆಂಡರ್ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದು, ಏಳು ಮಂದಿಯನ್ನು ರಕ್ಷಿಸಿದ್ದಾರೆ.
ಇನ್ನು ಮತ್ತೊಂದು ಘಟನೆಯಲ್ಲಿ ನೋಯ್ಡಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿಕೊಂಡಿದ್ದು, ನೋಯ್ಡಾ ಸೆಕ್ಟರ್ 80 ರಲ್ಲಿರುವ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲೇ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಿವೆ.