ಪಣಜಿ, ಆ 26 (DaijiworldNews/HR): ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೊನಾಲಿಯ ಇಬ್ಬರು ಸಹಾಯಕರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸೊನಾಲಿ ಪೋಗಟ್ ಸಾವಿನ ಪ್ರಕರಣದಲ್ಲಿ ಆರೋಪಿಗಳಾದ ಸುಧೀರ್ ಸಾಗ್ವಾನ್ ಮತ್ತು ಸುಖ್ ವಿಂದರ್ ವಾಸಿಯನ್ನು ವಶಕ್ಕೆ ಪಡೆಯಲಾಗಿದದೆ.
ಇನ್ನು ಸೊನಾಲಿ ದೇಹದಲ್ಲಿ ಹಲವಾರು ಗಾಯದ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಉಲ್ಲೇಖಗೊಂಡ ಬೆನ್ನಲ್ಲೇ ಗೋವಾ ಪೊಲೀಸರು ಆಕೆಯ ಇಬ್ಬರು ಸಹಚರರ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ.
ಆಗಸ್ಟ್ 22ರಂದು ಗೋವಾಕ್ಕೆ ಪೋಗಟ್ ಆಗಮಿಸಿದ್ದ ವೇಳೆ ಸಾಗ್ವಾನ್ ಮತ್ತು ವಾಸಿ ಆಕೆಯ ಜತೆಗಿದ್ದು,. ಆಗಸ್ಟ್ 23ರಂದು ಪೋಗಟ್ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು. ಆದರೆ ಇದೊಂದು ಕೊಲೆ ಎಂದು ಫೋಗಟ್ ಕುಟುಂಬಸ್ಥರು ಆರೋಪಿಸಿದ್ದರು.