ಅಂಬಾಲ (ಹರಿಯಾಣ), ಆ 26 (DaijiworldNews/DB): ಹರಿಯಾಣದ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ಸಂಗತ್ ರಾಮ್ (65), ಸುಖ್ವಿಂದರ್ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಎಲ್ಲರೂ ಊಟ ಮಾಡಿ ಮಲಗಿದ್ದರು. ಆದರೆ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸ್ಥಳದಲ್ಲಿ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.