ಹಾವೇರಿ, ಆ 26 (DaijiworldNews/DB): ರಾಜ್ಯದಲ್ಲಿ 2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ ಮುಂದಿಡೋಣ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದರು.
ನನ್ನನ್ನು ಹಲವರು ಹೊಗಳುತ್ತಾರೆ, ತೆಗಳುತ್ತಾರೆ. ಹೊಗಳಿದಾಗ ಹೆದರುತ್ತೇನೆ. ಆದರೆ ತೆಗಳಿದರೆ ಕೆಲಸದ ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಣೇಬೆನ್ನೂರಿನ ಮಾಗೋಡ ಕ್ರಾಸ್ ಬಳಿ 21 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿದರು.