ದೆಹಲಿ, ಆ 26 (DaijiworldNews/HR): 2007ರಲ್ಲಿ ನಡೆದ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನಿರಾಕರಿಸುವ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
2007 ರ ದ್ವೇಷ ಭಾಷಣದ ಈ ಪ್ರಕರಣದಲ್ಲಿ ಮಂಜೂರಾತಿ ನಿರಾಕರಣೆಯ ವಿಷಯವನ್ನು ಪರಿಶೀಲಿಸುವ ಅಗತ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ಇನ್ನು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು, ಮಂಜೂರಾತಿಗೆ ಸಂಬಂಧಿಸಿದ ಕಾನೂನು ಪ್ರಶ್ನೆಗಳನ್ನು ಸೂಕ್ತ ಪ್ರಕರಣದೊಂದಿಗೆ ವ್ಯವಹರಿಸಬಹುದು ಎಂದು ಹೇಳಿದೆ.
ಆದಿತ್ಯನಾಥ್ ಅವರು ಸಂಸತ್ ಸದಸ್ಯರಾಗಿದ್ದಾಗ ಅವರು ದ್ವೇಷಪೂರಿತ ಭಾಷಣ ಮಾಡಿದ್ದು, ಅವರ ವಿರುದ್ಧ ಗೋರಖ್ಪುರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.