ಬೆಂಗಳೂರು, ಆ 26 (DaijiworldNews/HR): ಕಾಂಗ್ರೆಸ್ನ ಹಿರಿಯ ನಾಯಕ ಕೆ ಎಚ್ ಮುನಿಯಪ್ಪ ಅವರು ಕಾಂಗ್ರೆಸ್ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿಯಾಗಿದ್ದು, ಅವರು ಕಾಂಗ್ರೆಸ್ನಿಂದ ಹೊರಬರುವ ಬಗ್ಗೆ ಚರ್ಚೆಯಾಗಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಇಂದು ಬೆಳಗ್ಗೆ ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಭಿ ಆಜಾದ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಹಿರಿಯ ನಾಯಕರನ್ನು ಪಕ್ಷದಲ್ಲಿ ಸೈಡ್ಲೈನ್ ಮಾಡಲಾಗಿದೆ ಎಂದು ಆಜಾದ್ ದೂರಿ ರಾಜೀನಾಮೆ ನೀಡಿದ್ದಾರೆ.
ಇನ್ನು ಕಳೆದ ಕೆಲ ದಿನಗಳಿಂದ ಪಕ್ಷದ ಹಿರಿಯ ನಾಯಕರು ಪಕ್ಷ ತೊರೆಯುತ್ತಿದ್ದು, ಈ ವೇಳೆ ಮುನಿಯಪ್ಪ ಮತ್ತು ಸುಧಾಕರ್ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.