ಶ್ರೀನಗರ, ಆ 26 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಪ್ರಯತ್ನಪಟ್ಟ 3 ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನ ಕಮಲ್ ಕೋಟೆ ಪ್ರದೇಶದ ಮಡಿಯನ್ ನಾನಕ್ ಪೋಸ್ಟ್ ಬಳಿ ಎಲ್ಒಸಿಯ ಭಾಗದಲ್ಲಿ ನುಸುಳಲು ಪ್ರಯತ್ನಿಸಿದ ಭಯೋತ್ಪಾದಕರನ್ನು ಭದ್ರತಾ ಪಡೆ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.
ಇನ್ನು ಭಯೋತ್ಪಾದಕರ ಮೂರು ಶವಗಳು, ಎರಡು ಎಕೆ ರೈಫಲ್ ಗಳು, ಒಂದು ಚೀನಾದ ಎಂ -16 ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆ ಸಿಬ್ಬಂದಿ ವಶಪಡಿಸಿಕೊಂಡಿಕೊಂಡಿದ್ದಾರೆ.