ದೆಹಲಿ, ಆ 26 (DaijiworldNews/HR): ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿರುವ ಚುನಾವಣಾ ಆಯೋಗವು ಅನರ್ಹತೆ ಶಿಫಾರಸು ಮಾಡಿದೆ ಎಂದು ತಿಳಿದು ಬಂದಿದೆ.
ಜಾರ್ಖಂಡ್ನ ಹಿರಿಯ ನಾಯಕರಾದ ಸರಯು ರಾಯ್ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶಾಸಕ ಸ್ಥಾನಕ್ಕೆ ಅರ್ಹರಲ್ಲ ಎಂದು ಚುನಾವಣಾ ಆಯೋಗವು ಘೋಷಿಸಿದೆ ಎಂದು ತಿಳಿಸಿದ್ದಾರೆ.
ಇನ್ನು ಅನರ್ಹತೆಯ ಅಧಿಸೂಚನೆಯು ರಾಜಭವನದಿಂದ ಹೊರಬಂದ ತಕ್ಷಣ, ಅವರು ರಾಜೀನಾಮೆ ನೀಡಬೇಕು ಅಥವಾ ನ್ಯಾಯಾಲಯದಿಂದ ಈ ಅಧಿಸೂಚನೆಗೆ ತಡೆಯಾಜ್ಞೆ ಪಡೆಯಬೇಕು ಎಂದು ತಿಳಿಸಿದ್ದಾರೆ.