ಬೆಂಗಳೂರು, ಆ 26 (DaijiworldNews/SM): ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಆಚರಣೆ ಮಾಡುವ ಕುರಿತಂತೆ ಸಭೆ ನಂತರ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಹೇಳಿದ್ದಾರೆ.
ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಾಮರಾಜಪೇಟೆ ಮೈದಾನದ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು ಕೋರ್ಟ್ ತೀರ್ಪು ಬಂದಿದೆ. ನಾಳೆ ಸಭೆ ಮಾಡುತ್ತೇವೆ. ಕಂದಾಯ ಸಚಿವರು, ಅಡ್ವೋಕೇಟ್ ಜನರಲ್ ಜೊತೆ ಸಭೆ ಮಾಡಿ ಕಾನೂನು ಸುವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡ್ತೇವ ಎಂದು ಹೇಳಿದರು.
ಕಂದಾಯ ಸಚಿವ ಆರ್. ಅಶೋಕ್ ಅವರು ಬಹುಜನರ ಬೇಡಿಕೆ ಈಡೇರಿಸುವ ಕೆಲಸ ಮಾಡುತ್ತೇವೆ ಕೋರ್ಟ್ ತೀರ್ಪು ಸಂತೋಷ ತಂದಿದೆ.. ಇದು ಬಹುಧರ್ಮಿಯರ ದೇಶ. ಅರ್ಜಿ ಪರಿಶೀಲನೆ ಮಾಡಬಹುದು ಎಂದು ಕೋರ್ಟ್ ಹೇಳಿದೆ. ಕಂದಾಯ ಇಲಾಖೆಗೆ ಅವಕಾಶ ನೀಡಿದೆ. ಪೂರ್ತಿ ಮಾಹಿತಿ ಓದಿದ ಬಳಿಕ ಸರ್ಕಾರ ನಿರ್ಧಾರ ಪ್ರಕಟ ಮಾಡಲಿದೆ ಅದಕ್ಕೂ ಮುನ್ನ ಸಿಎಂ ಮತ್ತು ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡ್ತೇವೆ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ಜಾಗ ಕಂದಾಯ ಇಲಾಖೆಗೆ ಸೇರಿದ್ದು ಎನ್ನೋದು ಸ್ಪಷ್ಟ ಆಗಿದೆ. ಮುಂಬರುವ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಮಾಡ್ತೇವೆ. ಇಂದು ಖುಷಿ ಆಗಿದೆ. ಒಳ್ಳೆಯ ತೀರ್ಪು. ನೆನ್ನೆ ಸ್ವಲ್ಪ ಬೇಸರ ಆಗಿತ್ತು. ಕಂದಾಯ ಭೂಮಿ ಅಲ್ಲ ಎಂದಿದ್ದಕ್ಕೆ ಬೇಸರ ಆಗಿತ್ತು. ಇಂದು ಖುಷಿ ಆಗಿದೆ. ಕಂದಾಯ ಇಲಾಖೆಗೆ ಈ ಜಾಗ ಸೇರಿದ್ದು ಎಂದು ತಿಳಿದು ಖುಷಿ ಆಗಿದೆ ಎಂದು ಹೇಳಿದರು.