ಚಿತ್ರದುರ್ಗ, ಆ 27 (DaijiworldNews/HR): ಚಿತ್ರದುರ್ಗ ಹೊರಹೊಲಯದ ರಾಷ್ಟ್ರೀಯ ಹೆದ್ದಾರಿ 48ರ ಸೀಬಾರ ಬಳಿ ಕಾರು ಮತ್ತು ಲಾರಿ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಮನೀಶ್(40), ಸಿಂಚನ(35) ಮತ್ತು ಭೂಮಿಕಾ ಎಂದು ಗುರುತಿಸಲಾಗಿದ್ದು ಅವರೆಲ್ಲರೂ ಬೆಂಗಳೂರಿನ ರಾಜಾಜಿನಗರದವರು ಎನ್ನಲಾಗಿದೆ.
ಬೆಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ ಫಾರ್ಚೂನರ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಗಳೂರು ಮಾರ್ಗಕ್ಕೆ ತಿರುಗಿ, ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಈ ವೇಳೆ ಮೂವರು ಸ್ಥಳದಲ್ಲೇ ಮೃತಪಟ್ಟು, ಮತ್ತೆ ಮೂವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕಂಗುಮಠ, ಗಿರಿಧರ ಮತ್ತು ಆಶಾಕಿರಣ್ ಎಂದು ಗುರುತಿಸಲಾಗಿದೆ.