ಚೆನ್ನೈ, ಆ 27 (DaijiworldNews/DB): ಚೆನ್ನೈನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಘಟನೆ ಶನಿವಾರ ನಡೆದಿದೆ.
ಸುಮಾರು 160 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನವು ಬೆಳಿಗ್ಗೆ 7.20 ಕ್ಕೆ ಚೆನ್ನೈಯಿಂದ ದುಬೈಗೆ ಹೊರಡಲು ಸಿದ್ದವಾಗಿತ್ತು. ಈ ವೇಳೆ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ಕರೆ ಬಂದಿದ್ದು, ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೂಡಲೇ ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ತತ್ಕ್ಷಣ ವಿಮಾನ ನಿಲ್ದಾಣ ಪೊಲೀಸರು ಕಾರ್ಯಾಚರಣೆಗಿಳಿದಿದ್ದು, ವಿಮಾನದೊಳಗೆ ಪರಿಶೀಲನೆ ನಡೆಸುತ್ತಿದ್ದಾರೆ. ಭದ್ರತಾ ಏಜೆನ್ಸಿಗಳೂ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಕರೆ ಮಾಡಿದವರ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.