ನವದೆಹಲಿ, ಆ 27(DaijiworldNews/MS): ಸುಪ್ರೀಂಕೋರ್ಟ್ ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ| ಉದಯ ಉಮೇಶ್ ಲಲಿತ್ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಇವರು ನ. 8 ರವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಇವವರು ಮೂಲತಃ ಮಹಾರಾಷ್ಟ್ರದವರಾಗಿದ್ದಾರೆ. ಮೂರು ತಿಂಗಳಿಗಿಂತ ಸ್ವಲ್ಪ ಕಡಿಮೆ ಅವಧಿಗೆ ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ನ್ಯಾಯಮೂರ್ತಿ ಲಲಿತ್ ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲರಾಗಿದ್ದರು. ಅವರ ತಂದೆ, ನ್ಯಾಯಮೂರ್ತಿ ಯು ಆರ್ ಲಲಿತ್, ಹಿರಿಯ ವಕೀಲರು ಮತ್ತು ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದಾರೆ.
ನ್ಯಾಯಮೂರ್ತಿ ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದು, ಆ ನಂತರ ನ್ಯಾಯಮೂರ್ತಿ ಡಿ. ವೈ ಚಂದ್ರಚೂಡ್ ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲಿದ್ದಾರೆ.