ತಮಿಳುನಾಡು, ಆ 27 (DaijiworldNews/HR): ಬಿ.ಸಿ.ರೋಡಿನ ಯುವಕನೋರ್ವ ತಮಿಳುನಾಡಿನ ಆಂಬೂರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತರನ್ನು ಇರ್ಷಾದ್ ತಲಪಾಡಿ (37) ಎಂದು ಗುರುತಿಸಲಾಗಿದೆ.
ಮಂಗಳೂರು ಬಂದರಿನಿಂದ ತಮಿಳುನಾಡಿನ ಚೆನ್ನೈ ಮಾರುಕಟ್ಟೆಗೆ ಮೀನು ಸಾಗಿಸುತ್ತಿದ್ದ ಲಾರಿಯು ಆಂಬೂರ್ ಎಂಬಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಈ ಅವಘಢ ಸಂಭವಿಸಿದೆ ಎನ್ನಲಾಗಿದೆ.