ನವದೆಹಲಿ, ಆ 28 (DaijiworldNews/HR): ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಈಗಾಗಲೇ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಹೊರ ಬಂದಿದ್ದು, ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮದೇ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಬಿಜೆಪಿ ಸೇರ್ಪಡೆ ವದಂತಿಯನ್ನು ನಿರಾಕರಿಸಿರುವ ಆಜಾದ್, "ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗುತ್ತೇನೆ. ರಾಜ್ಯದಲ್ಲಿ ನನ್ನದೇ ಪಕ್ಷ ಸ್ಥಾಪನೆ ಮಾಡುತ್ತೇನೆ. ರಾಷ್ಟ್ರೀಯ ಸಾಧ್ಯತೆಗಳನ್ನು ಬಳಿಕ ಪರಿಶೀಲಿಸುತ್ತೇನೆ" ಎಂದಿದ್ದಾರೆ.
ಇನ್ನು ನನಗೆ ಇಡೀ ಗಾಂಧಿ ಕುಟುಂಬದ ಜೊತೆ ವೈಯಕ್ತಿಕ ಮಟ್ಟದಲ್ಲಿ ಬಹಳ ಉತ್ತಮ ಭಾವನೆ ಇದ್ದು, ನಾನು ಇಲ್ಲಿ ವೈಯಕ್ತಿಕ ಒಡನಾಟದ ಬಗ್ಗೆ ಮಾತನಾಡುತ್ತಿಲ್ಲ. ನಾನು ಕಾಂಗ್ರೆಸ್ನ ಪತನದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.