ನವದೆಹಲಿ, ಆ 28 (DaijiworldNews/DB): ಎಐಸಿಸಿಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 17ರಂದು ಮತದಾನ ನಡೆಯಲಿದೆ.
ಸೋನಿಯಾ ಗಾಂಧಿ ಅವರನ್ನು ಎಐಸಿಸಿಸಿಯ ಹಂಗಾಮಿ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿತ್ತು. ಇದೀಗ ಹೊಸ ಪೂರ್ಣಾವಧಿ ಅಧ್ಯಕ್ಷರ ಆಯ್ಕೆಗಾಗಿ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದ್ದು, ಬಳಿಕ ಫಲಿತಾಂಶ ಘೋಷಣೆಯಾಗಲಿದೆ.
ಅಧ್ಯಕ್ಷರ ಆಯ್ಕೆಗೆ ಚುನಾವಣೆ ದಿನಾಂಕ ನಿಗದಿಪಡಿಸಲು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ಕರೆಯಲಾಗಿತ್ತು. ಸೋನಿಯಾ ಗಾಂಧಿಯವರು ವೈದ್ಯಕೀಯ ತಪಾಸಣೆಗಾಗಿ ಹೊರ ದೇಶಕ್ಕೆ ತೆರಳಿದ್ದು, ಅಲ್ಲಿಂದಲೇ ಆನ್ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ.