ಮೈನ್ ಪುರಿ, ಆ 28 (DaijiworldNews/DB): 12 ವರ್ಷದ ಬಾಲಕಿಯನ್ನು ಆರು ಮಂದಿ ದುರುಳರು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ನಡೆದಿದೆ.
ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರು ಮಂದಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳೆಲ್ಲರೂ 25-27 ವರ್ಷ ವಯಸ್ಸಿನವರು.
ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಸರ್ಕಲ್ ಅಧಿಕಾರಿ ಚಂದ್ರಕೇಶ್ ಸಿಂಗ್ ತಿಳಿಸಿದ್ದಾರೆ. ಸದ್ಯ ಆರೋಪಿಗಳು ತಲೆಮರಿಸಿಕೊಂಡಿದ್ದಾರೆ. ಹುಡುಕಾಟಕ್ಕಾಗಿ ಪೊಲೀಸರ ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ದೀಕ್ಷಿತ್ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.