ಬೆಂಗಳೂರು, ಆ 28 (DaijiworldNews/SM): ರಾಜ್ಯದಲ್ಲಿ ಮಳೆಯಿಂದ ಸಾಕಷ್ಟು ಆಸ್ತಿ ಪಾಸ್ತಿ ಹಾನಿ ಉಂಟಾಗಿದೆ. ಈ ಸಂಬಂಧ ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕದಲ್ಲಿ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಿದರು. ಸಭೆಯಲ್ಲಿ ಚರ್ಚಿಸಿ ಹಲವು ಪರಿಹಾರ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಿದೆ. ಇದರಿಂದ ರಾಜ್ಯದ ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ನಿರಂತರ ಮಳೆಗೆ ಹಾನಿ ಉಂಟಾಗಿದೆ. ರೈತರು ಕಂಗಾಲಾಗಿದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಿತು.