ನವದೆಹಲಿ, ಆ 29 (DaijiworldNews/HR): ಹಿಜಾಬ್ ವಿವಾದವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ಅರ್ಜಿಯನ್ನು ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ.
ಹಿಜಾಬ್ ಪ್ರಕರಣ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು. ಆದರೆ ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.
ಇನ್ನು ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಹೈಕೋರ್ಟ್, ಮಾರ್ಚ್ 15ರ ತೀರ್ಪಿನಲ್ಲಿ ಎತ್ತಿ ಹಿಡಿದಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ.