ಹಾವೇರಿ, ಆ 29 (DaijiworldNews/MS): ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಗಳು ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದರು. ಈ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.