ಹುಬ್ಬಳ್ಳಿ, ಆ 29 (DaijiworldNews/HR): ಮುರುಘಾ ಮಠದ ಸ್ವಾಮೀಜಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮದಲ್ಲೂ ಕಾನೂನಿನ ಪ್ರಕಾರ ತನಿಖೆ ನಡೆಸಲಾಗುತ್ತಿದೆ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಜೊತೆಗೆ ಪೋಷಕರನ್ನು ಕೂಡ ಸಂಪರ್ಕಿಸಿ ಮಾಹಿತಿ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ. ತನಿಖಾಧಿಕಾರಿಗಳಿಗೆ ಕಾನೂನಿನ ಪ್ರಕಾರ ತನಿಖೆ ನಡೆಸಲು ಮಾತ್ರ ಸೂಚನೆ ನೀಡಿದ್ದೇವೆ ಎಂದರು.
ಇನ್ನು ಮುರಘಾ ಮಠದ ಸ್ವಾಮೀಜಿಗಳನ್ನು ವಶಕ್ಕೆ ಪಡೆದಿದ್ದು ನನ್ನ ಗಮನಕ್ಕೆ ಬಂದಿಲ್ಲ. ನಾನೂ ಅಲ್ಲಿನ ಪೊಲೀಸರಿಗೆ ಪೋನ್ ಮಾಡಿ ಮಾಹಿತಿ ಪಡೆಯುತ್ತೇನೆ. ಈ ಹಂತದಲ್ಲಿ ಮಾಧ್ಯಮಕ್ಕೆ ಯಾವುದೇ ಮಾಹಿತಿಯನ್ನು ನೀಡಬಾರದೆಂದು ಕೋರ್ಟ್ ಆದೇಶವಿದೆ ಎಂದು ಹೇಳಿದ್ದಾರೆ.