ಬೆಂಗಳೂರು, ಆ 30 (DaijiworldNews/MS): ಪ್ರತಿ ಲೀಟರ್ ಹಾಲಿನ ಬೆಲೆಯನ್ನು 3ರೂ. ಏರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
"ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರವನ್ನು ಲೀಟರ್ಗೆ 3 ರೂ. ಹೆಚ್ಚಿಸುವ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ" ಎಂದು ರಾಜ್ಯ ಹಾಲು ಮಹಾಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸದ್ಯ ನಂದಿನಿ ಹಾಲಿನ ಮಾರಾಟ ದರ ಲೀಟರ್ಗೆ 37ರೂ. ಇದೆ. ಬೇರೆ ಬ್ರಾಂಡ್ಗಳ ಹಾಲಿನ ಬೆಲೆ ಲೀಟರ್ಗೆ 40 ರೂ.ನಿಂದ 51 ರೂ.ವರೆಗೆ ಇದೆ. ಹೀಗಾಗಿ ದರ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಅವರ ಜತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಚರ್ಚಿಸಿದ್ದಾರೆ. ಏರಿಕೆ ದರದ ಮೊತ್ತವನ್ನು ರೈತರಿಗೆ ವರ್ಗಾಯಿಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ' ಎಂದು ವಿವರಿಸಿದ್ದಾರೆ.