ನವದೆಹಲಿ, ಆ 30 (DaijiworldNews/HR): ಭಾರತದ ಖ್ಯಾತ ಕೃಷಿ ಮತ್ತು ಗ್ರಾಮೀಣ ಆರ್ಥಿಕ ತಜ್ಞ ಹಾಗೂ ಯೋಜನಾ ಆಯೋಗದ ಮಾಜಿ ಸದಸ್ಯ ಅಭಿಜಿತ್ ಸೇನ್ (72) ಅವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಭಿಜಿತ್ ಅವರಿಗೆ ಸೋಮವಾರ ರಾತ್ರೀ ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅಭಿಜಿತ್ ಸಹೋದರ ಡಾ. ಪ್ರಣಬ್ ಸೇನ್ ತಿಳಿಸಿದ್ದಾರೆ.
ಇನ್ನು ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅಭಿಜಿತ್ ಸೇನ್ ಅವರು 2004 ರಿಂದ 2014 ರ ಅವಧಿಯಲ್ಲಿ ಕೇಂದ್ರ ಯೋಜನಾ ಆಯೋಗದ ಸದಸ್ಯರಾಗಿದ್ದರು.