ನವದೆಹಲಿ, ಆ 30 (DaijiworldNews/HR): ದೇಶದಲ್ಲಿ 2021ರಲ್ಲಿ ದಾಖಲಾದ ಒಟ್ಟು ಆತ್ಮಹತ್ಯೆ ಪ್ರಕರಣಗಳ ಪೈಕಿ ಕರ್ನಾಟಕವೊಂದರಿಂದಲೇ ಶೇ.8ರಷ್ಟು ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ದೇಶದಲ್ಲಿ ಒಟ್ಟು ಶೇ.50.4ರಷ್ಟು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ(ಎನ್ಸಿಆರ್ಬಿ) ವರದಿ ಪ್ರಕಾರ, ಕಳೆದ ವರ್ಷ ರಾಜ್ಯದಲ್ಲಿ ಒಟ್ಟು 13,056 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ದೇಶದ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕವು ಐದನೇ ಸ್ಥಾನದಲ್ಲಿದೆ.
ಇನ್ನು ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯಲ್ಲಿ ಮಹಾರಾಷ್ಟ್ರ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, 2021ರಲ್ಲಿ ಮಹಾರಾಷ್ಟ್ರದಲ್ಲಿ 22,207 ಮಂದಿ(ಶೇ. 13.5) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಂತರದ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 18,925 ಮಂದಿ(ಶೇ. 11.5), ಮಧ್ಯಪ್ರದೇಶದಲ್ಲಿ 14,965 ಮಂದಿ(ಶೇ. 9.1), ಪಶ್ಚಿಮ ಬಂಗಾಳದಲ್ಲಿ 13,500 ಮಂದಿ(ಶೇ.8.2) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.