ಗುರುಗ್ರಾಮ್, ಆ 30 (DaijiworldNews/HR): ಲಿಫ್ಟ್ನಲ್ಲಿ ಸಿಕ್ಕಿಹಾಕಿಕೊಂಡಿದ್ದ ವ್ಯಕ್ತಿ ತನ್ನನ್ನು ರಕ್ಷಿಸಿದ ಭದ್ರತಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಘಟನೆ ಗುರುಗ್ರಾಮ್ನ ಕಟ್ಟಡವೊಂದರಲ್ಲಿ ನಡೆದಿದೆ.
ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಉದ್ಯಮಿ ವರುಣ್ ನಾಥ್ ವಿರುದ್ಧ ಗುರುಗ್ರಾಮ್ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆತನನ್ನು ಬಂಧಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ, ವರುಣ್ ಲಿಫ್ಟ್ನಿಂದ ಹೊರಬಂದ ತಕ್ಷಣ ಕೋಪದಿಂದ ವರ್ತಿಸಿ ಕಪಾಳಮೋಕ್ಷ ಮಾಡಿದ್ದಾನೆ. ಈ ವೇಳೆ ಸಿಬ್ಬಂದಿ ಅಶೋಕ್ ಕುಮಾರ್ ಮತ್ತು ಲಿಫ್ಟ್ ಆಪರೇಟರ್ಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.