ಗುಜರಾತ್, ಆ 30 (DaijiworldNews/MS): ಗುಜರಾತ್ ನ ಜನಪ್ರಿಯ ಗಾಯಕಿ, ನಟಿ ವೈಶಾಲಿ ಬಲ್ಸಾರಾ ಅವರ ಮೃತದೇಹ ಗುಜರಾತ್ನ ವಲ್ಸಾದ್ ಜಿಲ್ಲೆಯ ಪಾರ್ಡಿ ತಾಲೂಕಿನ ಪಾರ್ ನದಿಯ ದಡದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದೆ.
ನದಿಯ ದಡದಲ್ಲಿ ಕಾರು ಅನುಮಾನಾಸ್ಪದವಾಗಿ ನಿಂತಿರುವುದನ್ನು ಕಂಡ ಸ್ಥಳೀಯರು ಪರಡ್ಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ಪಾರ್ಡಿ ಪೊಲೀಸರ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟಿನ ಅವರ ಮೃತದೇಹ ಸಿಕ್ಕಿದೆ.
ಗುಜರಾತ್ ನ ಜನಪ್ರಿಯ ಗಾಯಕಿ, ನಟಿಯೂ ಆಗಿದ್ದ ವೈಶಾಲಿ ಬುಲ್ಸಾರ್ ಕಾಣೆಯಾಗಿದ್ದರು. ಎರಡು ದಿನಗಳ ಹಿಂದೆಯಷ್ಟೇ ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ವೈಶಾಲಿ ಪತಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವೈಶಾಲಿಗಾಗಿ ಹುಡುಕಾಟ ನಡೆಸಿದ್ದರು.
ಇದಾದ ನಂತರ ಭಾನುವಾರ ಪಾರ್ಡಿ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ವೈಶಾಲಿ ಶವ ಪತ್ತೆಯಾಗಿದ್ದು, ಈ ಘಟನೆ ಕೊಲೆಯ ಬಗ್ಗೆಯೂ ಹಲವು ಸಂಶಯಗಳನ್ನು ಹುಟ್ಟುಹಾಕಿದೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಗಾಯಕಿಯನ್ನು ಉಸಿರುಗಟ್ಟಿಸಿ ಕೊಂದಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ .