ಕೋಲ್ಕತ್ತಾ, ಆ 30 (DaijiworldNews/HR): ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಬ್ಯಾನರ್ಜಿ ಅವರನ್ನು ಶುಕ್ರವಾರ ಬೆಳಿಗ್ಗೆ ತನ್ನ ಕೋಲ್ಕತ್ತಾ ಕಚೇರಿಗೆ ಹಾಜರಾಗುವಂತೆ ಇ.ಡಿ ತಿಳಿಸಿದೆ.
ಇನ್ನು ನಾವು ಅಭಿಷೇಕ್ ಬ್ಯಾನರ್ಜಿ ಅವರನ್ನು ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ಕರೆದಿದ್ದು, ದೆಹಲಿಯಿಂದ ನಮ್ಮ ಅಧಿಕಾರಿಗಳು ಅವರನ್ನು ವಿಚಾರಣೆ ಮಾಡಲು ಬರುತ್ತಾರೆ ಎಂದು ಹಿರಿಯ ಇ.ಡಿ ಅಧಿಕಾರಿ ತಿಳಿಸಿದ್ದಾರೆ.