ನವದೆಹಲಿ, ಆ 30 (DaijiworldNews/HR): ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ದಿ.ಕಲ್ಯಾಣ್ ಸಿಂಗ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿದೆ ಎಂದು ತಿಳಿದು ಬಂದಿದೆ.
ಬಾಬ್ರಿ ಮಸೀದಿ ಪ್ರಕರಣದ ಕುರಿತಂತೆ 2019ರಲ್ಲಿ ಅಯೋಧ್ಯೆ ಕುರಿತ ಅಂತಿಮ ತೀರ್ಪು ಹೊರಬಿದ್ದ ಬಳಿಕ ಈ ಪ್ರಕರಣ ಮುಕ್ತಾಯ ಕಂಡಿದೆ ಎಂಬುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
ಇನ್ನು ಆಯೋಧ್ಯೆ ಪ್ರಕರಣದ ಕುರಿತು 30ವರ್ಷಕ್ಕಿಂತಲೂ ಹೆಚ್ಚು ಕಾಲ ಸುಪ್ರೀಂನಲ್ಲಿ ವಿಚಾರಣೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶರಾಗಿದ್ದಾರೆ. ಅಂತಿಮ ತೀರ್ಪು ಕೂಡಾ ನೀಡಲಾಗಿದೆ. ಹೀಗಾಗಿ ಕಲ್ಯಾಣ್ ಸಿಂಗ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಮುಕ್ತಾಯಗೊಳಿಸಲಾಗಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.