ನವದೆಹಲಿ, ಆ 30 (DaijiworldNews/HR): ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಸಂಬಂಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಈ ಅರ್ಜಿಯ ವಿಚಾರವಾಗಿ ದ್ವಿಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲು ನಕಾರ ವ್ಯಕ್ತಪಡಿಸಿದ ಕಾರಣ, ಇದೀಗ ಸುಪ್ರೀ ಕೋರ್ಟ್ ನ ಸಿಐಜೆ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆಯಾಗಿದೆ.
ಇಂದು ಕರ್ನಾಟಕ ಹೈಕೋರ್ಟ್ ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಿ ಆದೇಶಿಸಿದ್ದಂತ ಆದೇಶ ಪ್ರಶ್ನಿಸಿ, ವಕ್ಫ್ ಬೋರ್ಡ್ ಸಲ್ಲಿಸಲಾಗಿದ್ದಂತ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗಿತ್ತು.
ಈದ್ಗಾ ಮೈದಾನ ವಿವಾದದ ಕೇಸ್ ಸುಪ್ರೀಂ ಕೋರ್ಟ್ ನ ಸಿಐಜೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠಕ್ಕೆ ವರ್ಗಾವಣೆಗೊಂಡ ಕಾರಣ, ಕೋರ್ಟ್ ಹಾಲ್ 1ರಲ್ಲಿ ಪ್ರಸ್ತಾಪಿಸಲು ಕರ್ನಾಟಕ ಸರ್ಕಾರದ ಪರ ವಕೀಲ ತುಷಾರ್ ಮೆಹ್ತಾ, ವಕ್ಫ್ ಬೋರ್ಡ್ ಪರವಾಗಿ ಕಪಿಲ್ ಸಿಬಲ್ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಸುಪ್ರೀಂ ಕೋರ್ಟ್ ನ ಸಿಐಜೆ ನ್ಯಾಯಪೀಠದಲ್ಲಿ ಈದ್ಗಾ ಮೈದಾನ ವಿವಾದ ವಿಚಾರಣೆ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ.
ಇನ್ನು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಹಿನ್ನೆಲೆ ಮೈದಾನದ ಸುತ್ತಮುತ್ತ 3 ಡಿಸಿಪಿ, 21 ಎಸಿಪಿ, 47 ಇನ್ಸ್ಪೆಕ್ಟರ್ಗಳು, 130 ಪಿಎಸ್ಐ, 126 ಎಎಸ್ಐ, 900 ಕಾನ್ಸ್ಟೇಬಲ್ಗಳು, 120 ಆರ್ಎಫ್ ಸಿಬ್ಬಂದಿ ಮೈದಾನದ ಭದ್ರತೆಗೆ 1600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.