ನವದೆಹಲಿ, ಆ 30 (DaijiworldNews/HR): ಉತ್ತರ ಪ್ರದೇಶದ ಬಿಜೆಪಿಯ ಪಂಚಾಯತ್ ರಾಜ್ ಸಚಿವ ಭೂಪೇಂದ್ರ ಚೌಧರಿ ಅವರು ಮಂಗಳವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಚೌಧರಿ ಅವರು , ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಂಡ ಕಾರಣಕ್ಕಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
ಇನ್ನು ಮೊದಲ ಮತ್ತು ಎರಡನೇ ಅವಧಿಯಲ್ಲಿ ರಾಜ್ಯ ಸಚಿವ ಮತ್ತು ಕ್ಯಾಬಿನೆಟ್ ದರ್ಜೆ ಮಂತ್ರಿಯಾಗಿ ರಾಜ್ಯದ ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.