ಶ್ರೀನಗರ, ಆ 30 (DaijiworldNews/SM): ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50 ಕ್ಕೂ ಹೆಚ್ಚು ಮುಖಂಡರು ಇಂದು ರಾಜೀನಾಮೆ ನೀಡಿದರು.
ಜಂಟಿ ರಾಜೀನಾಮೆ ಪತ್ರವನ್ನು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದರು. ಚಂದ್ ಮತ್ತು ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ಪಕ್ಷದ ತಮ್ಮ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
ಕಾಂಗ್ರೆಸ್ ತೊರೆದಿರುವ ಆಜಾದ್ ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡಲಿದ್ದಾರೆ.