ಶ್ರೀನಗರ, ಆ 31 (DijiworldNews/HR): ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಲಷ್ಕರ್-ಇ-ತಯಬಾ (ಎಲ್ಇಟಿ) ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರು ಹತರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.
ಉಗ್ರರು ಶೋಪಿಯಾನ್ ಜಿಲ್ಲೆಯ ನಗ್ಬಾಲ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಪಹರೆ ಮತ್ತು ಶೋಧ ಕಾರ್ಯಾಚರಣೆ ಕೈಗೊಂಡಿದ್ದವು.
ಇನ್ನು ಕಾರ್ಯಾಚರಣೆ ವೇಳೆ ಉಗ್ರರು ಎನ್ಕೌಂಟರ್ ಗೆ ಮುಂದಾಗಿದ್ದು, ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.