ಕಿಶ್ತ್ವಾರ್, ಆ 31 (DaijiworldNews/DB): ಕಾರು ಸ್ಕಿಡ್ ಆಗಿ ಕಂದಕಕ್ಕೆ ಉರುಳಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಕಾರು ಚಿಂಗಮ್ನಿಂದ ಚತ್ರೂಗೆ ಸಂಚರಿಸುತ್ತಿತ್ತು. ಬುಂದಾ ಗ್ರಾಮದಿಂದ ಮುಂದೆ ಸ್ಕಿಡ್ ಆದ ಪರಿಣಾಮ ಕಾರು ರಸ್ತೆಯಿಂದ ಸುಮಾರು 300 ಅಡಿ ಆಳದ ಕಂದಕಕ್ಕೆ ಉರುಳಿದೆ. ಬಾಲಕಿ ಸೇರಿ ಎಂಟು ಮಂದಿ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಕಿಶ್ತ್ವಾರ್ ಉಪ ಆಯುಕ್ತ ದೇವಾಂಶ್ ಯಾದವ್ ತಿಳಿಸಿದ್ದಾರೆ.
ಇನ್ನು ಅಪಘಾತದಲ್ಲಿ ಮೃತಪಟ್ಟವರಿಗೆ ಟ್ವೀಟ್ ಮುಖಾಂತರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ತಲಾ 50,000 ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.