ನವದೆಹಲಿ, ಆ 31 (DaijiworldNews/DB): ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ತಾಯಿ ಪೌಲಾ ಮೈನೊ ಇಹಲೋಕ ತ್ಯಜಿಸಿದ್ದಾರೆ.
ಇಟಲಿಯ ತಮ್ಮ ನಿವಾಸದಲ್ಲಿ ಆಗಸ್ಟ್ 27ರ ಶನಿವಾರದಂದು ಅವರು ದೈವಾಧೀನರಾದರೆಂದು ತಿಳಿದು ಬಂದಿದೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪೌಲಾ ಮೈನೊ ಅಂತ್ಯಕ್ರಿಯೆ ನಿನ್ನೆ ನಡೆದಿದೆ ಎಂದು ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಕಾರಣಕ್ಕಾಗಿ ಸೋನಿಯಾ ಗಾಂಧಿಯವರು ಈಗಾಗಲೇ ವಿದೇಶಕ್ಕೆ ತೆರಳಿದ್ದು, ಅವರು ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ವಾಧ್ರಾ ಅವರೊಂದಿಗೆ ತೆರಳಿ ತಾಯಿಯನ್ನು ಕಳೆದ ಕೆಲ ದಿನಗಳ ಹಿಂದಷ್ಟೇ ಭೇಟಿಯಾಗಿದ್ದರು ಎನ್ನಲಾಗಿದೆ.