ಬೆಂಗಳೂರು, ಸೆ. 01(DaijiworldNews/SM): ಗುರುವಾರ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ. ಅಧಿಕಾರಿಗಳ ಜೊತೆ ಸ್ಥಳ ಪರೀಶಲನೆ ಮಾಡಿ ಸಮಸ್ಯೆಯನ್ನು ಬಗೆಹರಿಸಲು ಸ್ಥಳದಲ್ಲೇ ಸೂಚನೆ ನೀಡುತ್ತೇನೆ. ರಾಜಕಾಲುವೆ ನಿರ್ಮಾಣ ಕಾರ್ಯಕ್ಕೆ ಈಗಾಗಲೇ 1,500 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿವೃಷ್ಟಿ, ಪ್ರವಾಹ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, "ಬೆಂಗಳೂರಿನಲ್ಲಿ ಕಳೆದ ಒಂದು ವಾರಗಳಿಂದ ಸತತ ಮಳೆಯಾಗಿದ್ದು, ಹಲವು ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಮಹದೇವಪುರ ಮತ್ತು ಬೊಮ್ಮನಹಳ್ಳಿ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ," ಎಂದು ಹೇಳಿದರು.