ಶ್ರೀನಗರ, ಸೆ 01 (DaijiworldNews/DB): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಬುಧವಾರ ರಾತ್ರಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ.
ಸೋಪೋರ್ನ ಮೊಹಮ್ಮದ್ ರಫಿ ಮತ್ತು ಪುಲ್ವಾಮಾದ ಕೈಸರ್ ಅಶ್ರಫ್ ಹತ್ಯೆಯಾದ ಭಯೋತ್ಪಾದಕರು. ಹತ ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಪೋರ್ ಪಟ್ಟಣದ ಬೊಮೈ ಪ್ರದೇಶದಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಇಬ್ಬರನ್ನು ಹತ್ಯೆ ಮಾಡಿದರು. ಈ ವೇಳೆ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ನಾಗರಿಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.