ಜಮ್ಮು, ಅ 02 (DaijiworldNews/HR): ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ವ್ಯಕ್ತಿಯೋರ್ವನ ಮೇಲೆ ಗುಂಡಿನ ಮಾಡಿದ್ದು, ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ.
ಗಾಯಗೊಂಡಿರುವ ವ್ಯಕ್ತಿಯನ್ನು ಮುನಿರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ.
ಮುನಿರುಲ್ ಇಸ್ಲಾಂ ಪಶ್ಚಿಮ ಬಂಗಾಳದಿಂದ ಬಂದಿದ್ದ ವಲಸೆ ಕಾರ್ಮಿಕನಾಗಿದ್ದು, ಕೆಲಸದ ನಿಮಿತ್ತ ಕಾಶ್ಮೀರಕ್ಕೆ ಬಂದಿದ್ದನ್ನು ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಜಮ್ಮು-ಕಾಶ್ಮೀರ ಪೊಲೀಸರು, ಪುಲ್ವಾಮದ ಉಗರ್ಗುಂಡ್ ಪ್ರದೇಶದಲ್ಲಿ ಉಗ್ರರು ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದು, ತಕ್ಷಣ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.