ಕೊಲ್ಕತ್ತ, ಅ 02 (DaijiworldNews/HR): ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಕಲ್ಲಿದ್ದಲು ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಶುಕ್ರವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಅಭಿಷೇಕ್ ಅವರನ್ನು ವಿಚಾರಣೆ ನಡೆಸಲು ಐವರು ಅಧಿಕಾರಿಗಳನ್ನೊಳಗೊಂಡ ಇಡಿ ಅಧಿಕಾರಿಗಳ ತಂಡ ಗುರುವಾರ ರಾತ್ರಿಯೇ ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ.
ಇನ್ನು ಮಮತಾ ಬ್ಯಾನರ್ಜಿ ಅವರ ಸೋದರಳಿಯನ ತನಿಖೆ ಹಿನ್ನೆಲೆಯಲ್ಲಿ ಇಡಿ ಕಚೇರಿ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.